
ಮಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ತಾಲಿಬಾನ್ ರೀತಿಯ ಆಡಳಿತ ನಡೆಸುತ್ತಿದೆ ಎಂದು ಆರ್.ಅಶೋಕ ಹೇಳಿದ್ದಾರೆ.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಬೋಳಿಯಾರ್ ನಲ್ಲಿ ಭಾರತ್ ಮಾತಾ ಕಿ ಜೈ ಹೇಳಿದ ಬಿಜೆಪಿ ಕಾರ್ಯಕರ್ತರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಇದು ಪೂರ್ವ ಯೋಜಿತ ಕೃತ್ಯ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ ಬಿಟ್ಡು ಬೇರೇನು ಘೋಷಣೆ ಹಾಕಿಲ್ಲ. ಹಾಕಿದ್ದರೆ ಪೊಲೀಸರು ದಾಖಲೆ ನೀಡಲಿ ಎಂದು ಹೇಳಿದರು.
ಪ್ರಕರಣದ ಸಂಬಂಧ ಗಾಯಾಳುಗಳಿಗೆ ಜಿಲ್ಲಾಡಳಿತ ಚಿಕಿತ್ಸೆಯ ವೆಚ್ಚ ನೀಡಬೇಕು. ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ಹಾಕಲಾದ ಕೇಸನ್ನು ವಾಪಸ್ ಪಡೆಯಬೇಕು. ಪಕ್ಷದಿಂದಲೂ ನೆರವು ನೀಡಲಾಗುವುದು. ಬಿಜೆಪಿ ಕಾರ್ಯಕರ್ತರು ಹೆದರಬೇಕಾಗಿಲ್ಲ. ಅವರ ಜೊತೆ ಪಕ್ಷ ನಿಲ್ಲುತ್ತದೆ. ರಾಜ್ಯ ಕಾಂಗ್ರೆಸ್ ನ ಸಾಧನೆ ಕಳೆದ ಒಂದು ವರ್ಷದಲ್ಲಿ ಶೂನ್ಯ. ಇದು ಲೋಕಸಭೆ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಬಿಎಂಪಿ, ತಾ.ಪಂ ಜಿಪಂ ಚುನಾವಣೆಗೂ ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿಯಲಿದೆ ಎಂದರು.
ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಲಿದೆ, ವಿಧಾನ ಸಭೆಯಲ್ಲೂ ಈ ಸಂಬಂಧ ಹೋರಾಟ ನಡೆಯಲಿದೆ ಎಂದರು.
Poll (Public Option)

Post a comment
Log in to write reviews