
ರೌಡಿಗಳ ನಡುವೆ ನಡೆದ ತಲ್ವಾರ್ ಕಾಳಗದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಡಲನಗರಿ ಮಂಗಳೂರಿನ ಬಂಟ್ವಾಳದಲ್ಲಿ ನಡೆದಿದೆ. ಇನ್ನೂ ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆ ಸಂಬಂಧ ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗೆ ಡಿ.ವೈ.ಎಸ್ಪಿ ನೇತೃತ್ವದಲ್ಲಿ ಎರಡು ತಂಡಗಳ ರಚನೆ ಮಾಡಲಾಗಿದೆ. ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಹಲ್ಲೆ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದೆ.
ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ಮುಂದೆ ಇದು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಇಲಾಖೆಯೊಳಗೆ ಚರ್ಚಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್.ಪಿ ಯತೀಶ್.ಎನ್ ಹೇಳಿದ್ದಾರೆ.
Poll (Public Option)

Post a comment
Log in to write reviews