
ದಾವಣಗೆರೆ: ಸ್ಪಿರಿಟ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೆದ್ದಾರಿ ಅಂಡರ್ ಪಾಸ್ ಸೇತುವೆಯಿಂದ ಕೆಳಗೆ ಬಿದ್ದಿರುವ ಘಟನೆ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಸ್ಪಿರಿಟ್ ಸೋರಿಕೆ ಆಗಿದ್ದರಿಂದ ಹೆದ್ದಾರಿಯಲ್ಲಿ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
ಬೆಂಗಳೂರು ಕಡೆಯಿಂದ ಪುಣೆ ಕಡೆಗೆ ಸಾಗುತ್ತಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್ ಮೊದಲು ಹೆದ್ದಾರಿಯ ಡಿವೈಡರ್ಗೆ ಗುದ್ದಿದೆ. ಬಳಿಕ ಟ್ಯಾಂಕರ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಮೇಲಿಂದ ಕೆಳಗೆ ಬಿದ್ದ ಹಿನ್ನೆಲೆ ಸ್ಪಿರಿಟ್ ಸೋರಿಕೆ ಆಗಿದ್ದು, ಕೆಲ ಕಾಲ ಹೆದ್ದಾರಿ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಈ ಅಪಘಾತದಲ್ಲಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ನಿಂದ ಸ್ಪಿರಿಟ್ ಸೋರಿಕೆ ಆಗುತ್ತಿದ್ದಂತೆ ಬೆಂಕಿ ಹೊತ್ತಿಕೊಳ್ಳುವ ಆತಂಕ ಜನರಲ್ಲಿ ಇತ್ತು. ಕೂಡಲೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಣಗೊಳಿಸಿದರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Poll (Public Option)

Post a comment
Log in to write reviews