
ಸೆಂಟ್ ಲೂಸಿಯಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.
ಸೆಂಟ್ ಲೂಸಿಯಾದ ಡರೆನ್ ಸಮಿ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 206 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಈ ಮೂಲಕ ಆಸ್ಷ್ರೇಲಿಯಾ ಭಾರತದ ವಿರುದ್ಧ 24 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು. ಈ ಗೆಲುವಿನ ಮೂಲಕ ಟೀ ಇಂಡಿಯಾ ಸೇಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದು, 27 ರಂದು ನಡೆಯುವ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
Poll (Public Option)

Post a comment
Log in to write reviews