
ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ನಟಿ ಹೇಮಾ ಜಾಮೀನು ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎನ್‌ಡಿಪಿಎಸ್ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪಾರ್ಟಿಯಲ್ಲಿ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜೂನ್ 14ರವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು.
Poll (Public Option)

Post a comment
Log in to write reviews