
ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 5 ಜನರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಸದ್ಯ ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Poll (Public Option)

Post a comment
Log in to write reviews