
ನೇಪಾಳದ ಹಲವೆಡೆ ಭೂಕುಸಿತದಿಂದ 112 ಜನ ಮೃತಪಟ್ಟಿದ್ದಾರೆ. ಸದ್ಯ ಭೂಕುಸಿತದಿಂದ ನಾಪತ್ತೆಯಾದ 79 ಜನರಿಗಾಗಿ ಹುಡುಕಾಟ ನಡೆಯುತ್ತಿದೆ. ಕಠ್ಮಂಡು ಸೇರಿದಂತೆ ನೇಪಾಳದ ಹಲವೆಡೆ ಭಾರಿ ಮಳೆ, ಪ್ರವಾಹದಿಂದ ಸಾವಿರಾರು ಜರನು ಮನೆ ಮಠ ಕಳೆದುಕೊಂಡಿದ್ದಾರೆ.
ಇನ್ನೂ ನೇಪಾಳದಲ್ಲಿ ನಿರಂತರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಭೀಕರ ಪ್ರವಾಹ, ಮಳೆಗೆ ನೇಪಾಳ ಜನತೆ ತತ್ತರಿಸಿದ್ದಾರೆ. ಪ್ರವಾಹದಿಂದ ಮನೆ ಕಳೆದುಕೊಂಡು ನಿರಾಶ್ರಿತರಾದ ಜನರನ್ನು ರಕ್ಷಣಾಪಡೆಗಳು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ. ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ನೇಪಾಳ ಸರ್ಕಾರ ಸೂಚನೆ ನೀಡಿದೆ.
ಹೆಲಿಕಾಪ್ಟರ್ಗಳು ಮತ್ತು ಮೋಟಾರ್ಬೋಟ್ಗಳೊಂದಿಗೆ 3,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಗಳನ್ನು ಮಾಡಿ ಅನೇಕರನ್ನು ರಕ್ಷಿಸಿದ್ದಾರೆ.‘ನಿರಂತರ ಮಳೆಯಿಂದಾಗಿ 112 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ 34 ಮಂದಿ ಕಠ್ಮಂಡು ಕಣಿವೆಯಲ್ಲಿಯೇ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ದೇಶದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ.
Poll (Public Option)

Post a comment
Log in to write reviews