
ನೇಪಾಳ: ಶೌರ್ಯ ವಿಮಾನ ಪತನಗೊಂಡು 18 ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನೇಪಾಳದ ಕಠ್ಮಂಡುವಿನಲ್ಲಿ ನಡೆದಿದೆ.
19 ಪ್ರಯಾಣಿಕರಿದ್ದ ಶೌರ್ಯ ಏರ್‌ಲೈನ್ಸ್ ವಿಮಾನವು ಬುಧವಾರ (ಜುಲೈ 24) 11 ಗಂಟೆ ಸುಮಾರಿಗೆ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಖರಾಗೆ ಹಾರುತ್ತಿತ್ತು. ಈ ವೇಳೆಗೆ ಶೌರ್ಯ ವಿಮಾನ ಟೇಕಾಫ್ ಆಗುವ ವೇಳೆ ಪತನಗೊಂಡಿದೆ. ದುರಂತದಲ್ಲಿ 18 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಟಿಐಎ ವಕ್ತಾರ ಪ್ರೇಮನಾಥ್ ಠಾಕೂರ್ ತಿಳಿಸಿದ್ದಾರೆ.
ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಪತನದ ನಂತರ ವಿಮಾನದಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ ಎಂದು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ಹೇಳಿರುವುದಾಗಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.
ಸಾವು ನೋವುಗಳ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಅಪಘಾತ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
Poll (Public Option)

Post a comment
Log in to write reviews