2024-09-19 09:14:45

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ

 ಬೆಂಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮಂಗಳೂರು ಹೆದ್ದಾರಿಯ ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರೆಲ್ಲಾ ಒಂದೇ ಕುಟುಂಬದವರು ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಕಾರಿನಲ್ಲಿದ್ದವರು ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದರು. ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿ ಮಾಗಡಿ ಮೂಲದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿದರು. ನಜ್ಜುಗುಜ್ಜಾದ ಕಾರಿನಲ್ಲಿದ್ದ ಮೃತದೇಹವನ್ನು ಹೊರತೆಗದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಭೀಕರ ಅಪಘಾತದ ದೃಶ್ಯ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

Post a comment

No Reviews