
ಹೊಸದಿಲ್ಲಿ: ಪಶ್ಚಿಮ ಬಂಗಾಳದ ನ್ಯೂ ಜಲ್‌ಪೈಗುರಿ ಸಮೀಪ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಇಂದು ಬೆಳಗ್ಗೆ ನಿಲ್ದಾಣ ಸಮೀಪ ಸಿಗ್ನಲ್‌ಗಾಗಿ ಕಾಯುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಹಿಂದಿನಿಂದ ಗೂಡ್ಸ್ ರೈಲು ಬಂದು ಡಿಕ್ಕಿ ಹೊಡೆದಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ವಿಶಾದ ವ್ಯಕ್ತಪಡಿಸಿದ್ದು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ರೈಲು ದುರಂತ ತಿಳಿದು ಆಘಾತವಾಯಿತು ಎಂದಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ 5ಕ್ಕೂ ಹೆಚ್ಚು ಪ್ರಯಾಣಿಕರು ಮೃತರಾಗಿದ್ದು, 40ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯಗಳಾಗಿವೆ. ಸ್ಥಳಕ್ಕೆ ರಕ್ಷಣಾ ತಂಡವು ಧಾವಿಸಿದೆ.
ರೈಲಿನಲ್ಲಿದ್ದ ಪ್ರಯಾಣಿಕರ ಕುರಿತು ತುರ್ತು ಮಾಹಿತಿಗಾಗಿ 03674263126 ಹೆಲ್ಪ್ ಲೈನ್ ಸೇವೆಯನ್ನ ತೆರೆಯಲಾಗಿದೆ.
Poll (Public Option)

Post a comment
Log in to write reviews