
ಕಲಬುರಗಿ: ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್ಗೆ ಬೆಂಕಿ ಇಡಲಾಗಿದೆ, ಈ ಘಟನೆಯು ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋ ರೂಂ ನಡೆದಿದೆ.
ಎಲೆಕ್ರ್ಟಿಕ್ ಬೈಕ್ ಶೋ ರೂಂಗೆ ಬೆಂಕಿ ತಗುಲಿದ್ದು. ಆರಂಭದಲ್ಲಿ ಎಲ್ಲರೂ ಶಾಟ್೯ ಸಕ್ರ್ಯೂಟ್‌ನಿಂದ ಬೆಂಕಿ ತಗುಲಿದೆ ಎಂದು ತಿಳಿದಿದ್ದರು. ಆದರೆ ಇದೀಗ ಪೊಲೀಸರ ತನಿಖೆ ವೇಳೆ ಬೆಂಕಿ ಹಚ್ಚಿದ್ದು ಕಿರಾತಕನೋರ್ವ ಎಂದು ಪತ್ತೆಯಾಗಿದೆ.
ಮಹಮ್ಮದ್ ನದೀಮ್ ಎಂಬ ವ್ಯಕ್ತಿ ತನ್ನ ಏಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಸಿಬ್ಬಂದಿ ಜೊತೆ ವಾಗ್ವಾದ ಮಾಡಿ ಬಳಿಕ ಪೆಟ್ರೋಲ್ ತಂದು ಶೋ ರೂಂ ಒಳಗೆ ಬೆಂಕಿ ಹಚ್ಚಿದ್ದು ಬಯಲಾಗಿದೆ. ಘಟನೆ ಸಂಬಂಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇನ್ನು ಘಟನೆಯಲ್ಲಿ 6 ಹೊಸ ಎಲೆಕ್ಟ್ರಿಕ್ ಬೈಕ್ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಕೇವಲ 20 ದಿನದ ಹಿಂದೆ ಓಲಾ ಕಂಪನಿಯ ಸ್ಕೂಟರ್ ಖರೀದಿಸಿದ್ದ ಆರೋಪಿಯು ತನ್ನ ಬೈಕ್ ಪದೇ ಪದೇ ರಿಪೇರಿಗೆ ಬರುತ್ತಿದೆ ಎಂದು ಸಿಟ್ಟಾಗಿದ್ದು. ಸಾಕಷ್ಟು ಬಾರಿ ಶೋರೂಂಗೆ ಬಂದು ಸರಿಪಡಿಸಿಕೊಡುವಂತೆ ಮನವಿ ಮಾಡಿದ್ದ. ಆದ್ರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದು ಇದರಿಂದ ಬೇಸತ್ತು ಶೋ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
Poll (Public Option)

Post a comment
Log in to write reviews