
ಬೆಂಗಳೂರು: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಬಿದ್ದ ಘಟನೆ ಇಂದು (ಆಗಸ್ಟ್ 3) ಬೆಳಗ್ಗೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಶವಂತಪುರ ಸರ್ಕಲ್ನಲ್ಲಿ ಬೆಳಗಿನ ಜಾವ 3.45ರ ಸುಮಾರಿಗೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.
ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಕಡೆ ಸಂಚರಿಸುವಾಗ ಯಶವಂತಪುರ ಸರ್ಕಲ್ ಬಳಿ ಮುಂದೆ ಹೋಗುತ್ತಿದ್ದ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ವಿಭಜಕಕ್ಕೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಅಪ್ಪಳಿಸಿದೆ. ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡರು. ಬೈಕ್ ಸವಾರನಿಗೂ ಗಾಯವಾಗಿದೆ. ಕಾರು ನಜ್ಜುಗುಜ್ಜಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಮದ್ಯದ ಬಾಟಲಿಗಳು ದೊರೆತಿದ್ದು, ಮದ್ಯ ಸೇವಿಸಿ ವೇಗವಾಗಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ತಮಿಳುನಾಡು ನೋಂದಣಿ ಸಂಖ್ಯೆಯ ಕಾರು ಇದಾಗಿದೆ. ಗಾಯಾಳುಗಳ ಹೆಸರು, ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews