
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್ ಬಳಿ ಕಾರು ಟೋಲ್ ಡಿವೈಡರ್ಗೆ ಡಿಕ್ಕಿ ಹೊಡೆದು ಮೂರು ತಿಂಗಳ ಮಗು ಸಾವನ್ನಪ್ಪಿದ ಘಟನೆ ನಡೆದಿದ್ದು, ಮೃತಪಟ್ಟ ಮಗುವನ್ನು ಸಾನ್ವಿ ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.
ಅಪಘಾತಕ್ಕೀಡಾದ ಕಾರು ಹುಬ್ಬಳ್ಳಿಯಿಂದ ಮುಂಡರಗಿಗೆ ಹೊರಟಿತ್ತು. ವಿರೇಶ ಸಜ್ಜನ ಶೆಟ್ಟರ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews