
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ.
ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ (SIT) ಪೊಲೀಸರು ಮುನಿರತ್ನ ಅವರನ್ನು ವಿಚಾರಣೆಗೆಂದು ಕೋರ್ಟ್‌ಗೆ ಹಾಜರುಪಡಿಸಿದರು. ಈ ವೇಳೆ ಮತ್ತೆ ವಶಕ್ಕೆ ನೀಡುವಂತೆ ಎಸ್‌ಐಟಿ ಕೇಳಿದ ಹಿನ್ನೆಲೆಯಲ್ಲಿ ಕೋರ್ಟ್ ಅ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ವೇಳೆ ಮನೆ ಊಟಕ್ಕೆ ಅನುಮತಿ ನೀಡುವಂತೆ ಮುನಿರತ್ನ ಪರ ವಕೀಲರು ಮನವಿ ಮಾಡಿದರು. ಈ ಮನವಿಗೆ ಕೋರ್ಟ್ ಜೈಲಾಧಿಕಾರಿಗಳಿಗೆ ಮನವಿ ಮಾಡಿ ಎಂದು ಸೂಚನೆ ನೀಡಿದೆ.
Poll (Public Option)

Post a comment
Log in to write reviews