
ಶಿವಮೊಗ್ಗ: ಗಣಪತಿ ವಿಸರ್ಜನೆಯ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೃದ್ಧನೊಬ್ಬ ಡಿಜೆ ಸದ್ದಿಗೆ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತಪಟ್ಟ ಇ. ಎಸ್. ಶ್ಯಾಮಣ್ಣ(66) ನವರನ್ನು ಬಿದರಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಬೇಗುವಳ್ಳಿ ಗ್ರಾಮದಲ್ಲಿ ಮೊನ್ನೆ ರಾತ್ರಿ ಗಣೇಶನ ವಿಸರ್ಜನೆಯ ಮೆರವಣಿಗೆಯಲ್ಲಿ ಬಳಸಿದ್ದ ಡಿಜೆ ಸೌಂಡ್ಗೆ ಶ್ಯಾಮಣ್ಣ ಡ್ಯಾನ್ಸ್ ಮಾಡುತ್ತಿದ್ದು, ಡ್ಯಾನ್ಸ್ ಮಾಡುತ್ತಲೇ ಅವರು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಡ್ಯಾನ್ಸ್ ಮಾಡುವಾಗ ಶ್ಯಾಮಣ್ಣ ಅವರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಡಿಜೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews