2024-12-24 07:16:37

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಎಲ್ಲಾ ಶಾಲೆಗಳಲ್ಲಿ ಯೋಗ ದಿನ ಕಡ್ಡಾಯ ಎಂದು ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಸಾಕಷ್ಟು ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿರುತ್ತದೆ. ಇದು ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ. 2015 ಜೂನ್ 21ರಂದು ಮೊದಲ ಬಾರಿಗೆ ಜಾರಿಗೆ ಬಂದಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವಾದ್ಯಂತ ಪ್ರತಿವರ್ಷ ಜೂನ್ 21ರಂದು ಆಚರಿಸಲಾಗುತ್ತದೆ. 

ಇದೀಗ ಮಕ್ಕಳಿಗೆ ಕೂಡ ಯೋಗದ ಮಹತ್ವ ಕುರಿತು ಅರಿವು ಮೂಡಿಸಲು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನದಂತೆ ಜಿಲ್ಲಾ ಉಪನಿರ್ದೇಶಕರು ಹಾಗೂ ಉಪ ಸಮನ್ವಯ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗದಿಂದ ಆರೋಗ್ಯ ಎಂದು ಪ್ರೋತ್ಸಾಹಿಸಿ ಯೋಗ ದಿನವನ್ನು ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದೆ. ಶಾಲೆಯ ಮುಖ್ಯ ಶಿಕ್ಷಕರು ಫೋಟೋ ಜತೆ ಯೋಗ ದಿನದ ವರದಿಯನ್ನು ಕಚೇರಿಗೆ ಸಲ್ಲಿಸಲು ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ.

Post a comment

No Reviews