ಬೈರುತ್ನಲ್ಲಿರುವ ಭಾರತೀಯರು ಲೆಬನಾನ್ಗೆ ಭೇಟಿ ನೀಡದಂತೆ ಸಲಹೆ ನೀಡಿದ ರಾಯಭಾರ ಕಚೇರಿ

ಇತ್ತೀಚಿನ ವೈಮಾನಿಕ ದಾಳಿಗಳು ಸ್ಫೋಟಗಳ ಘಟನೆಯ ನಂತರ ಮುಂದಿನ ಸೂಚನೆ ಬರುವವರೆಗೂ ಲೆಬನಾನ್‌ಗೆ ಪ್ರಯಾಣಿಸದಂತೆ ಬೈರುತ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಬುಧವಾರ ಸಲಹಾ ಸೂಚನೆ ನೀಡಿದೆ.
ಲೆಬನಾನ್‌ನಲ್ಲಿ ಇತ್ತೀಚಿನ ವೈಮಾನಿಕ ದಾಳಿಗಳು ಮತ್ತು ಸಂವಹನ ಸಾಧನಗಳಲ್ಲಿ ಸ್ಫೋಟಗಳು ಸಂಭವಿಸಿದ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕರು ಎಚ್ಚರಿಕೆ ವಹಿಸುವಂತೆ ಮತ್ತು ಸಂಘರ್ಷ ಪೀಡಿತ ದೇಶಕ್ಕೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಲೆಬನಾನ್‌ಗೆ ಪ್ರಯಾಣಿಸದಂತೆ ಬೈರುತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬಲವಾಗಿ ಸಲಹೆ ನೀಡಿದೆ.
ಲೆಬನಾನ್‌ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರು ಕೂಡಲೇ ದೇಶವನ್ನು ತೊರೆಯುವಂತೆ ಭಾರತೀಯ ರಾಯಭಾರಿ ಕಚೇರಿ ಸೂಚಿಸಿದೆ. ಅಲ್ಲಿಯೇ ಇರಬೇಕಾದವರು ತೀವ್ರ ಎಚ್ಚರಿಕೆ ವಹಿಸುವಂತೆ ಮತ್ತು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಇದರೊಂದಿಗೆ ಅಲ್ಲಿ ವಾಸಿಸುವ ನಾಗರಿಕರು ತಮ್ಮ ಚಟುವಟಿಕೆಗಳನ್ನು ಮಿತಿಗೊಳಿಸುವಂತೆ ಕೇಳಿಕೊಳ್ಳಲಾಗಿದೆ.
ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮನವಿ ಮಾಡಲಾಗಿದೆ. ಲೆಬನಾನ್‌ನಲ್ಲಿ ಇಸ್ರೇಲ್‌ನ ಇತ್ತೀಚಿನ ಮಿಲಿಟರಿ ದಾಳಿಯಲ್ಲಿ ಕನಿಷ್ಠ 558 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದೆ. ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬುಲ್ಲಾಗಳನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಮುಂದುವರೆಸಿದೆ ಎಂಬುದು ಗಮನಾರ್ಹ.
Poll (Public Option)

Post a comment
Log in to write reviews