
ಗದಗ :ಸಾಲಬಾಧೆ ತಾಳಲಾರದೆ ರೈತನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಹಿರೇಮಣ ವ್ಯಾಪ್ತಿಯಲ್ಲಿ ನಡೆದಿದೆ.
ಶಂಕ್ರಣ್ಣ ಗೋಡಿ(54).ಆತ್ಮಹತ್ಯೆ ಮಾಡಿಕೊಂಡ ರೈತ. ಟ್ರ್ಯಾಕ್ಟರ್ ಖರೀದಿ, ಬೆಳೆ ಸಾಲ, ಆಸ್ಪತ್ರೆ ವೆಚ್ಚಕ್ಕಾಗಿ ಹೀಗೆ ಹಲವು ಬ್ಯಾಂಕ್ ಗಳಲ್ಲಿ ಸುಮಾರು 10 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು.
ರೈತನಿಗೆ. ವರ್ಷದಿಂದ ವರ್ಷಕ್ಕೆ ಸಾಲದ ಬಡ್ಡಿ ಹೆಚ್ಚಾಗುತ್ತಿತ್ತು. ಇತ್ತ ಐದು ಎಕರೆಯಲ್ಲಿ ಬೆಳೆದಿದ್ದ ಹೆಸರು, ಹತ್ತಿ, ಶೇಂಗಾ, ಮೆಣಸಿನಕಾಯಿ ಬೆಳೆ ಅತಿವೃಷ್ಟಿಯಿಂದ ನಾಶವಾಗಿತ್ತು. ಇದರಿಂದ ಬ್ಯಾಂಕ್ ಸಾಲ, ಬೆಳೆ ನಷ್ಟದಿಂದ ತೀವ್ರ ಮನನೊಂದು ಜಮೀನಲ್ಲಿ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಪ್ರಕರಣ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews