
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ. ಅದರಲ್ಲೂ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದು ಸಹ ಉಂಟು. ಇನ್ನೂ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ತೀರ್ಪನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ.
ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯವಾಗಿದ್ದು, ನಾಳೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ತೀರ್ಪು ನೀಡಲಿದ್ದು, ಮುಡಾ ಹಗರಣದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.
Poll (Public Option)

Post a comment
Log in to write reviews