2024-12-24 05:40:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

 `ಬ್ಯಾಕ್ ಬೆಂಚರ್ಸ್’ ಚಿತ್ರ ಇದೇ ವಾರ ರಾಜ್ಯಾದ್ಯಂತ ತೆರೆಗೆ

ಬೆಂಗಳೂರು; “ಬ್ಯಾಕ್ ಬೆಂಚರ್ಸ್” ಚಿತ್ರ ಈ ವಾರ ರಾಜ್ಯಾದ್ಯಂತ ರಿಲೀಸ್ ಆಗಲಿದ್ದು ಪಿಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರ ನಿರ್ದೇಶನ, ನಿರ್ಮಾಣದಲ್ಲಿ ಚಿತ್ರ ಮೂಡಿಬರಲಿದೆ.

ಬ್ಯಾಕ್ ಬೆಂಚರ್ಸ್’ ಚಿತ್ರ ವಿಭಿನ್ನ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿದೆ. ಈಗಾಗಲೇ ಟೀಸರ್ ಮೂಲಕ ಈ ಚಿತ್ರ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದು, ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ.

 ಚಿತ್ರ ಈ ವಾರ ರಾಜ್ಯಾದ್ಯಂತ ರಿಲೀಸ್ ಆಗಲಿದ್ದು ಪಿಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರ ನಿರ್ದೇಶನ, ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ
ಚಿತ್ರದ ಬಿಡುಗಡೆ ಮುಂಚಿನ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ರಾಜಶೇಖರ್ ಅವರು, ನಾನು ಸಾಕಷ್ಟು ಸೋಲು ನೋಡಿದ್ದೇನೆ. ನನಗೆ ಸೋಲು ಹೊಸತಲ್ಲ. ಈ ಚಿತ್ರ ಈ ಹುಡುಗಾರಿಕೆ ಗೆಲ್ಲಬೇಕು. ಏಕೆಂದರೆ, ಈ ಹುಡುಗರು ಕಳೆದ ಮೂರು ವರ್ಷಗಳನ್ನು ಈ ಚಿತ್ರಕ್ಕಾಗಿ ಮೀಸಲಿಡಲಾಗಿದೆ ಬರೀ ನಟನೆ ಅಷ್ಟೇ ಅಲ್ಲ, ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ, ಇದು ಅವರಿಗಾದರೂ ಗೆಲ್ಲಲೇಬೇಕು ಎಂದರು.

ಚಿತ್ರ ರಂಜನೆ ಮತ್ತು ವಿನೋದಕ್ಕಾಗಿಯಷ್ಟೇ ಅಲ್ಲ. ಇದರಲ್ಲಿ ಹದಿಹರೆಯದವರ ತವಕ ಮತ್ತು ತಾಕಲಾಟಗಳನ್ನು ಕಟ್ಟಿಕೊಡಲಾಗಿದೆ. ಇವತ್ತಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ವ್ಯವಸ್ಥೆ ಇದೆಲ್ಲದರ ಕುರಿತಾದ ಒಂದು ಕಥೆ ಇದು. ರಾಜಶೇಖರ್ ನನ್ನ ಸಹಪಾಠಿ, ಈ ಚಿತ್ರವನ್ನು ಕೇವಲ ಅವರಿಗಾಗಿ ಮಾಡಿದ್ದೇನೆ.ಇದು ಸುಲಭವಾಗಿ ತಯಾರಾದಂತ ಚಿತ್ರವಲ್ಲ ಎಂದು ನಟ ಸುಚೇಂದ್ರ ಪ್ರಸಾದ್ ತಿಳಿಸಿದರು. ನಂತರ ಚಿತ್ರದಲ್ಲಿ ನಟಿಸಿರುವ ಕಲಾವಿದರು ಹಾಗೂ ತಂತ್ರಜ್ಞರು “ಬ್ಯಾಕ್ ಬೆಂಚರ್ಸ್” ಬಗ್ಗೆ ಮಾತನಾಡಿದರು.
ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Post a comment

No Reviews