2024-09-19 09:11:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

“ಕೃಷ್ಣಂ ಪ್ರಣಯ  ಸಖಿ ಚಿತ್ರದ ಮೊದಲ ಸಾಂಗ್‌ ರಿಲೀಸ್

ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ನಟ ಗಣೇಶ್  ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಾಗಿ ನಿಶಾನ್ ರಾಯ್ ಅವರು ಬರೆದು ಚಂದನ್ ಶೆಟ್ಟಿ ಹಾಡಿರುವ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಎಂಬ ಗೀತೆ ಮಾಲ್ ಆಫ್ ಮೈಸೂರಿನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು.
ಕಾರ್ಯಕ್ರಮದಲ್ಲಿ ನಟ ಗಣೇಶ್ ಮಾತನಾಡಿ, ಶ್ರೀನಿವಾಸರಾಜು ಅವರು ಕರೆ ಮಾಡಿ ಕಥೆ ಹೇಳಬೇಕೆಂದಾಗ ನನಗೆ ಆಶ್ಚರ್ಯವಾಯಿತು. ಅವರು “ದಂಡುಪಾಳ್ಯ” ದಂತಹ ಥ್ರಿಲ್ಲರ್ ಚಿತ್ರ ಮಾಡಿರುವ ನಿರ್ದೇಶಕರು. ನಾನು ನೋಡಿದರೆ ಪ್ರೇಮಕಥೆಗಳ ನಾಯಕ. ನನಗೆ ಇವರು ಯಾವ ತರಹ ಕಥೆ ಮಾಡಿರಬಹುದು ಅಂದುಕೊಂಡು ಕಥೆ ಕೇಳಿದೆ. ಅವರು ಕಥೆ ಶುರು ಮಾಡಿದ ಕೂಡಲೆ ನೀವು ಮದುವೆ ಗಂಡಿನ ತರಹ ಬರುತ್ತೀರಾ. ಎಂಟು ಜನ ನಾಯಕಿಯರು ಮದುವೆ ಹೆಣ್ಣಿನ ತರಹ ಸಿದ್ದವಾಗಿರುತ್ತಾರೆ. ಆಗ ಇದು ನನ್ನ ಜಾನರ್‌ನ ಚಿತ್ರ ಅಂದುಕೊಂಡೆ. ಆದರೆ ಚಿತ್ರದಲ್ಲಿ ಬರೀ ಇಷ್ಟೇ ಇಲ್ಲ. ಒಳ್ಳೆಯ ಟ್ವಿಸ್ಟ್ ಇಟ್ಟಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್.
ಚಿತ್ರ ನಿರ್ದೇಶಕ ಶ್ರೀನಿವಾಸ್ ರಾಜು ಮಾತನಾಡಿ, ಇದು ಗಣೇಶ್ ಅವರಿಗಾಗಿಯೇ ಮಾಡಿರುವ ಕಥೆ. ಫ್ಯಾಮಿಲಿ ಎಂಟರ್‌ಟೈನರ್. ಎಲ್ಲಾ ಜನರೇಶನ್ ಅವರಿಗೂ ಹಿಡಿಸುವ ಕಥೆಯೂ ಹೌದು. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ ಎಂದರು.
ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಮಾತನಾಡಿ, ಇದೊಂದು ಕೌಟುಂಬಿಕ ಕಥೆ ಹೊಂದಿರುವ ಚಿತ್ರ. ಹಾಡುಗಳು ಚೆನ್ನಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.
41 ನೇ ಚಿತ್ರ

 “ಕೃಷ್ಣಂ ಪ್ರಣಯ ಸಖಿ” ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.
 

Post a comment

No Reviews