
ಒಡಿಶಾ: ಪುರಿ ಶ್ರೀ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲು ಬಿಜೆಪಿ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಮೊದಲ ಭರವಸೆಯನ್ನು ಬಿಜೆಪಿ ಈಡೇರಿಸಿದೆ.
ಮೊದಲ ಸಂಪುಟ ಸಭೆಯಲ್ಲಿ ದೇವಸ್ಥಾನದ ಬಾಗಿಲು ತೆರೆಯುವ ಕುರಿತು ನಿರ್ಧಾರ ಕೈಗೊಳ್ಳಲಾಯ್ತು. ಅಲ್ಲದೇ ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಲು ಸರ್ಕಾರ 500 ಕೋಟಿ ರೂಪಾಯಿಗಳ ವಿಶೇಷ ನಿಧಿಯನ್ನು ಘೋಷಿಸಿದೆ.
ಈ ಬಗ್ಗೆ ಮಾತನಾಡಿದ ನೂತನ ಸಿಎಂ ಮೋಹನ್ ಚರಣ್ ಮಾಝಿ, ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ತೆರೆಯಲು ಪ್ರಸ್ತಾಪಿಸಿದ್ದೇವೆ. ಪ್ರಸ್ತಾವನೆಯನ್ನು ಅಂಗೀ ಕರಿಸಲಾಗಿದೆ. ಜಗನ್ನಾಥ ದೇವಾಲಯದ ಅಭಿವೃದ್ಧಿಗೆ ಮತ್ತು ಇತರ ಕೆಲಸಗಳಿಗೆ ಮುಂದಿನ ರಾಜ್ಯ ಬಜೆಟ್ ನಲ್ಲಿ ನಿಧಿಯನ್ನು ಮೀಸಲಿಡಲಿದ್ದೇವೆ ಎಂದು ಹೇಳಿದರು.
ಕರೋನಾ ಸಮಯದಲ್ಲಿ ದೇವಾಲಯದ ಮೂರು ಬಾಗಿಲು ಮುಚ್ಚಲಾಗಿತ್ತು. ದೇವಸ್ಥಾನದ ಎಲ್ಲಾ ದ್ವಾರಗಳನ್ನು ತೆರೆಯುವುದು ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಭರವಸೆಗಳಲ್ಲಿ ಒಂದಾಗಿತ್ತು. ನಾಲ್ಕು ದ್ವಾರಗಳ ಪೈಕಿ ಮೂರು ದ್ವಾರಗಳನ್ನು ಮುಚ್ಚಿದ್ದರಿಂದ ಭಕ್ತರು ತೊಂದರೆ ಅನುಭವಿಸುತ್ತಿದ್ದರು. ಈ ಹಿಂದಿನ ಬಿಜೆಡಿ ಸರ್ಕಾರ, ಒಂದೇ ಬಾಗಿಲಿನಿಂದ ಪ್ರವೇಶಕ್ಕೆ ಅವಕಾಶ ನೀಡಿತ್ತು. ಇದರಿಂದ ಭಕ್ತರಿಗೆ ತೊಂದರೆ ಆಗುತ್ತಿತ್ತು. ಬಾಗಿಲು ತೆರವಿಗೆ ಸಾಕಷ್ಟು ಆಗ್ರಹ ಮಾಡಿದ್ದರೂ ಕೂಡ ಸರ್ಕಾರ ಒಪ್ಪಿಕೊಂಡಿರಲಿಲ್ಲ. ಆದರೆ ಈಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ದೇವಾಸ್ಥಾನದ ನಾಲ್ಕೂ ಬಾಗಿಲುಗಳನ್ನು ತೆರೆದು ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದೆ.
Poll (Public Option)

Post a comment
Log in to write reviews