ಕರ್ನಾಟಕ
ಶಶಿಧರ್‌ಭಟ್ ಅವರ ಆಸ್ಪೆತ್ರೆಯ ವೆಚ್ಚ ಸರ್ಕಾರವೇ ನೋಡಿಕೊಳ್ಳಲಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟ್‌ರವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ
Poll (Public Option)

Post a comment
Log in to write reviews