
ಬೆಂಗಳೂರು: ನಟ ದರ್ಶನ್ (Actor Darshan) ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಸೆಪ್ಟೆಂಬರ್ 05ಕ್ಕೆ ಮುಂದೂಡಿದೆ. ಇದರಿಂದ ನಟ ದರ್ಶನ್‌ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಜೈಲು ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿತ್ತು. ಆದರೆ ಜೈಲಾಧಿಕಾರಿಗಳು ದರ್ಶನ್ ಮನವಿ ಪುರಸ್ಕರಿಸಿರಲಿಲ್ಲ. ಇನ್ನು ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್ ಪರ ವಕೀಲರು ಸಮಯ ಕೋರಿದ್ದರಿಂದ ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ರಾಜ್ಯದ ಎಲ್ಲಾ ಕಾರಾಗೃಹಗಳಲ್ಲೂ ಕೈದಿಗಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಹೀಗಾಗಿ ದರ್ಶನ್ ಮನೆಯೂಟ ಕೋರಿದ ಅರ್ಜಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಜೈಲಾಧಿಕಾರಿಗಳು ವರದಿ ನೀಡಿರುವುದಾಗಿ ಜಸ್ಟೀಸ್ ಎಂ ನಾಗಪ್ರಸನ್ನ ಅವರಿಗೆ ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಮಾಹಿತಿ ನೀಡಿದರು. ಈ ವೇಳೆ ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್ ಪರ ವಕೀಲೆ ಸಂಜೀವಿನಿ ನಾವದಗಿ ಸಮಯ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜು.25ರಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ನಟ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews