
ಕೊಡಗು: ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.
ಶಿಲ್ಪ (36) ಮೃತಪಟ್ಟ ದುರ್ದೈವಿ. ಪತಿ ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ. ಪತ್ನಿಯನ್ನು ಕೊಂದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ನಡೆಸುತ್ತಿದ್ದಾರೆ. ಈ ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
Poll (Public Option)

Post a comment
Log in to write reviews