
ಮಂಡ್ಯ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮುನ್ನೆಲೆಗೆ ಬಂದಿದೆ.
ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ ಪಕ್ಷಾತೀತವಾಗಿ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಕ್ಕೆ ವೇದಿಕೆ ಸಿದ್ಧಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತದ ನಿರ್ದೇಶನದಂತೆ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಎಲ್ಲಾ ಪಕ್ಷಗಳ ರೈತ ಪ್ರತಿನಿಧಿಗಳು, ರೈತ ಮುಖಂಡರ ಸಭೆ ಕರೆದು ಸಾಧಕ-ಬಾಧಕಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಹೊಸ ಕಾರ್ಖಾನೆಯನ್ನು, ಈಗ ಕಾರ್ಖಾನೆ ಇರುವ ಸ್ಥಳದಲ್ಲೇ ಸ್ಥಾಪಿಸಿದರೆ ಎಷ್ಟು ಹಣ ಖರ್ಚಾಗಲಿದೆ. ಬೇರೆ ಬೇರೆ ಘಟಕಗಳ ಸ್ಥಾಪನೆಗೆ ಅವಕಾಶ ಸಿಗಲಿದೆಯೇ, ಬೇರೆಡೆ ಸ್ಥಾಪಿಸಿದರೆ ಆಗುವ ಖರ್ಚೆಷ್ಟು. ರೈತರಿಗೆ ಆಗಬಹುದಾದ ಅನುಕೂಲಗಳೇನು ಎನ್ನುವುದನ್ನು ತಾಂತ್ರಿಕ ಸಮಿತಿ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ.
Poll (Public Option)

Post a comment
Log in to write reviews