ಕರ್ನಾಟಕ
ಸುದ್ದಿಗೋಷ್ಠಿ ವೇಳೆ ಹೃದಯಾಘಾತದಿಂದ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘದ ಮುಖಂಡ ಸಾವು

ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ಕ್ರಮಕ್ಕೆ ವಿರೋಧಿಸಿ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಿರುವ ವೇಳೆಯೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ರವಿಚಂದ್ರನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತ ಪಿ ಕೆ ರವಿಚಂದ್ರನ್ ಚನ್ನಸಂದ್ರ ನಿವಾಸಿಯಾಗಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘದ ಮುಖಂಡರಾಗಿದ್ದರು. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ಕ್ರಮಕ್ಕೆ ವಿರೋಧಿಸಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದರೂ ಅದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾಗಿ ಎಂದು ವೈದ್ಯರು ಹೇಳಿದರು.
Poll (Public Option)

Post a comment
Log in to write reviews