
ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದರೂ, ಜೂನ್ 6ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಹೀಗಾಗಿ ರಾಜ್ಯ ಸರ್ಕಾರವು ಪ್ರಮುಖ ನಿರ್ಧಾರ ಕೈಗೊಳ್ಳಲು ಮತ್ತು ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಒಂದು ತಿಂಗಳು ಕಾಯಲೇಬೇಕಿದೆ.
.ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳಲ್ಲಿ ತೀವ್ರವಾದ ಬರಗಾಲ ಇದೆ. ಮುಂಗಾರು ಮಳೆಗಾಲವೂ ಸಮೀಪಿಸುತ್ತಿದೆ. ಆಯೋಗವು ನೀತಿಸಂಹಿತೆ ಸಡಿಲಿಕೆ ಮಾಡಿದರೆ ಬರ ನಿರ್ವಹಣೆ, ವಿಪತ್ತು ನಿರ್ವಹಣೆಗೆ ಸಿದ್ಧತೆ ಜತೆಗೆ ಅಭಿವೃದ್ಧಿ ಕಾಮಗಾರಿ ಹಾಗೂ ನೀತಿ ನಿರೂಪಣೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲು ರಾಜ್ಯ ಸರ್ಕಾರ ಯೋಚಿಸಿತ್ತು ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಮಾತನಾಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ .ಚುನಾವಣಾ ನೀತಿಸಂಹಿತೆಯನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಯಾವುದೇ ಮನವಿ ಬಂದಿಲ್ಲ. ಅದಕ್ಕೆ ಅವಕಾಶವೂ ಇಲ್ಲ. ದೇಶದ ಇತರೆಡೆ ಇರುವಂತೆ ರಾಜ್ಯದಲ್ಲೂ ಜೂನ್ 6ರವರೆಗೆ ನೀತಿಸಂಹಿತೆ ಜಾರಿಯಲ್ಲಿ ಇರುತ್ತದೆ' ಎಂದು
Poll (Public Option)

Post a comment
Log in to write reviews