ರಾಜಕೀಯ
ಬಹುನಿರೀಕ್ಷಿತ ಮ್ಯಾಕ್ಸ್ ಚಿತ್ರದ ಟೀಸರ್ ರಿಲೀಸ್ : ಮಾಸ್-ಗಾಡ್ ಅವತಾರದಲ್ಲಿ ಕಿಚ್ಚ ಸುದೀಪ್

ಬೆಂಗಳೂರು; ಸ್ಯಾಂಡಲ್ವುಡ್ ನಟ ಸುದೀಪ್ ನಟನೆಯ “ಮ್ಯಾಕ್ಸ್” ಚಿತ್ರದ ಟೀಸರ್ ಇಂದು ರಿಲೀಸ್ ಆಗಿದೆ.
ಸಿನಿಮಾದ ಟೀಸರ್ ಈಗ ಎಲ್ಲೆಡೆ ಸದ್ದು ಮಾಡಿದ್ದು, ಮಾಸ್-ಗಾಡ್ ಅವತಾರದಲ್ಲಿ ನಟ ಸುದೀಪ್ ಕಾಣಿಸಿಕೊಂಡಿದ್ದು ಟೀಸರ್ನಲ್ಲಿನ ಆಕ್ಷನ್ ದೃಶ್ಯಗಳು ಮೈ ಜುಂ ಎನ್ನಿಸುವಂತಿದ್ದು,ಅಭಿಮಾನಿಗಳ ಕಣ್ಮನ ಸೆಳೆದಿದೆ. “ಮ್ಯಾಕ್ಸ್” ಚಿತ್ರದ, ಟೀಸರ್ ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತೆ ಮಾಡಿದೆ.
ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ “ಮ್ಯಾಕ್ಸ್” ಚಿತ್ರದಲ್ಲಿ ನಟ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದು ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ನಟ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದೆ.
Poll (Public Option)

Post a comment
Log in to write reviews