
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಮಳೆಗೆ ಬೆಂಗಳೂರಿನಲ್ಲಿ ಸಿಟಿ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಸದ್ಯ ನಗರದಲ್ಲಿ ಸರಾಸರಿ 36 ಮಿ.ಮೀ. ಮಳೆ ದಾಖಲಾಗಿದೆ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರ್ನಾಲ್ಕು ದಿನ ಮಳೆ ಮುನ್ಸೂಚನೆ ನೀಡಿದ್ದು, ಜನ ಜಾಗ್ರತೆಯಿಂದ ಇರಬೇಕಿದೆ.ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಸಂಜೆಯಾಗುತ್ತಿದಂತೆ ಬರುವ ಮಳೆಯ ಆರ್ಭಟಕ್ಕೆ ರಾಜಧಾನಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಸದ್ಯ ನಿನ್ನೆ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ರಸ್ತೆಗಳು ಹೊಳೆಯಂತಾಗಿವೆ. ತಡೆಗೋಡೆ ಕುಸಿದು ಅಪಾರ್ಟ್ಮೆಂಟ್ ಒಳಗೆ ನೀರು ನುಗ್ಗಿದೆ.
ಇನ್ನೂ ಮಳೆಗೆ ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ ಜಲಾವೃತವಾಗಿದ್ದು, 603 ಫ್ಲಾಟ್ಗಳಿದ್ದು, 2ಸಾವಿರ ನಿವಾಸಿಗಳಿಗೆ ಜಲದಿಗ್ಬಂಧನ ಹಾಕಿತ್ತು. ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನ ಶಿಫ್ಟ್ ಮಾಡಲಾಗಿದೆ. ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ನಲ್ಲಿ 80 ಕ್ಕೂ ಹೆಚ್ಚು ಕಾರು, ನೂರಕ್ಕೂ ಹೆಚ್ಚು ಬೈಕ್ಗಳು ನೀರಿನಲ್ಲಿ ಮುಳುಗಿವೆ.
Poll (Public Option)

Post a comment
Log in to write reviews