ಟಾಪ್ 10 ನ್ಯೂಸ್
ಆರೋಪಿಯನ್ನು ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ದುಷ್ಕರ್ಮಿಗಳಿಂದ ಅಟ್ಯಾಕ್.

ಗದಗ : ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಿದ ಘಟನೆ ನಗರದ ಬೆಟಗೇರಿ ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ನಡೆದಿದೆ.
ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರು ಕರೆದೊಯ್ಯುವ ವೇಳೆ ಗದಗದ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನವನ್ನೇ ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು, ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.
ಆರೋಪಿಯನ್ನು ಕರೆದೊಯ್ಯಲು ಇನೋವಾ ಕಾರ್ ನಲ್ಲಿ ಪೊಲೀಸರು ಬಂದಿದ್ದರು. ಸದ್ಯ ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೇ ಗಂಗಾವತಿ ಪೊಲೀಸರು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಬೆಟಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
Poll (Public Option)

Post a comment
Log in to write reviews