
ಬೆಂಗಳೂರು: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌ರವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸಹಿತ ಹಲವು ಗಣ್ಯರು ಹಿರಿಯ ಅಧಿಕಾರಿಗಳು ಹಾಜರಿದ್ದರು.
Poll (Public Option)

Post a comment
Log in to write reviews