ಟಾಪ್ 10 ನ್ಯೂಸ್
ಕಾಡುಗಳ್ಳ ವೀರಪ್ಪನ್ ಕೊಂದಿದ್ದ ಪೊಲೀಸ್ ಅಧಿಕಾರಿ ನಿವೃತ್ತಿ ಹಿಂದಿನ ದಿನವೇ ಸಸ್ಪೆಂಡ್

ಚೆನ್ನೈ: ಕಾಡುಗಳ್ಳ ವೀರಪ್ಪನ್ನನ್ನು ಹೊಡೆದುರುಳಿಸಿದ ವಿಶೇಷ ಕಾರ್ಯಪಡೆಯ ತಂಡದಲ್ಲಿದ್ದ ತಮಿಳುನಾಡು ಪೊಲೀಸ್ ಹೆಚ್ಚುವರಿ ಅಧೀಕ್ಷಕ ಎಸ್ ವೆಲ್ಲಾದುರೈ ಅವರು, ನಿವೃತ್ತಿಗೆ ಒಂದು ದಿನ ಮೊದಲು ಅಮಾನತು ಮಾಡಲಾಗಿದೆ.
ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವೆಲ್ಲಾದುರೈ ಅವರನ್ನು ತಮಿಳುನಾಡು ಗೃಹ ಇಲಾಖೆ ಗುರುವಾರ ಅಮಾನತುಗೊಳಿಸಿತು. ಮೂಲಗಳ ಪ್ರಕಾರ, 2013ರಲ್ಲಿ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ‘ಕೊಕ್ಕಿ ಕುಮಾರ್ ಅಲಿಯಾಸ್ ರಾಮು ಎಂಬಾತನ ಲಾಕಪ್ ಡೆತ್ ಪ್ರಕರಣದಲ್ಲಿ ವೆಲ್ಲಾದುರೈ ಭಾಗಿಯಾಗಿದ್ದರು ಎಂದು ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ.
Poll (Public Option)

Post a comment
Log in to write reviews