
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನಗರ ಜಿಲ್ಲಾ ನಾಯಕರು ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಕೆ ಮಾಡಿರುವ ಕುರಿತು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರಾರೊಂದಿಗೆ ಮಾತನಾಡಿದ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ರಹಸ್ಯ ಅಡಗಿದ್ಯೋ ಗೊತ್ತಿಲ್ಲ. ಆದರೆ ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ರಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರದ ಕರಾಳಮುಖವಾಗಿದೆ. ಇದು ಕೆಲವರ ತುಷ್ಟೀಕರಣದ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನು ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದರು.
Poll (Public Option)

Post a comment
Log in to write reviews