
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುನಿರತ್ನ ಅವರು ಸಾಕಷ್ಟು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಎಫ್ಐಆರ್ ದಾಖಲಾಗಿದೆ. ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಅವರಿಗೆ ಕಾನೂನು ಉಲ್ಲಂಘಿಸಿ ಎಂದು ನಾವು ಹೇಳಿಲ್ಲವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬಸಾಪೂರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಮುನಿರತ್ನನಿಗೆ ಅಪರಾಧ ಮಾಡು ಎಂದು ನಾವು ಹೇಳಿದ್ದೆವಾ?...ಮುನಿರತ್ನ ಮೇಲೆ ಮೂರು ಪ್ರಕರಣ ದಾಖಲಾಗಿದೆ. ಶಾಸಕರ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪದ ಮೇಲೆ ಕಾನೂನು ಪ್ರಕಾರ ಮುನಿರತ್ನ ಅವರನ್ನು ಬಂಧಿಸಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿ ಬಿಕೆ ಸಿಂಗ್ ಅವರಿಗೆ ತನಿಖೆ ನೇತೃತ್ವ ವಹಿಸಲಾಗಿದೆ. ಸರ್ಕಾರ ಯಾರ ವಿರುದ್ಧವೂ ಇಲ್ಲ. ನಾವು ಯಾರನ್ನೂ ಗುರಿಯಾಗಿಸಿಕೊಂಡಿಲ್ಲ ಅಥವಾ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಪೊಲೀಸರು ಮತ್ತು ಎಸ್‌ಐಟಿಗೆ ತನಿಖೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ತಿಳಿಸಿದರು.
Poll (Public Option)

Post a comment
Log in to write reviews