
ಬೆಂಗಳೂರು: ಈ ಬಾರೀ ಅಕ್ಟೋಬರ್ ಮೊದಲ ವಾರದಲ್ಲೇ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದ್ದು, ರಾಜ್ಯ ರಾಜಧಾನಿ ಸೇರಿದಂತೆ ದಕ್ಷಿಣ ಒಳನಾಡು ಭಾಗದಲ್ಲಿ ಅಕ್ಟೋಬರ್ 9ರವರೆಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಕಳೆದ ಎರಡು ದಿನಗಳಿಂದ ಹಿಂಗಾರು ಮಳೆ ಶುರುವಾಗಿದ್ದು, ದಕ್ಷಿಣ ಒಳನಾಡು ಭಾಗದ ಬೆಂಗಳೂರು, ಮಂಡ್ಯ, ರಾಮನಗರ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವಡೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ನಗರದ ಅನೇಕ ಕಡೆ ವರುಣ ತಂಪೆರೆದಿದ್ದಾನೆ.
Poll (Public Option)

Post a comment
Log in to write reviews