ಪಂಚೆ ಧರಿಸಿ ಬಂದ ರೈತನಿಗೆ ಜಿ.ಟಿ ಮಾಲ್ ಅವಮಾನ ಒಳ ಬಿಡದೆ ದರ್ಪ ತೋರಿದ ಸಿಬ್ಬಂದಿ.
ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಪಂಚೆ ಧರಿಸಿ ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಜಿ.ಟಿ ಮಾಲ್ ಸಿಬ್ಬಂದಿ ದರ್ಪ ತೋರಿದ ಘಟನೆ ನಡೆದಿದೆ.
ಹಾವೇರಿ ಮೂಲದ ನಾಗರಾಜ್ ಎಂಬುವವರು ತಮ್ಮ ತಂದೆ -ತಾಯಿಯನ್ನು ಮಾಗಡಿ ರಸ್ತೆಯಲ್ಲಿರೋ ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ತಂದೆ-ತಾಯಿಗೆ ಸಿನಿಮಾ ತೋರಿಸಲು ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಆದ್ರೆ ನಮ್ಮ ತಂದೆ ಪಂಚೆ ಧರಿಸಿದ್ದಾರೆ ಅನ್ನೋ ಕಾರಣಕ್ಕೆ ಮಾಲ್ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಮಾಲ್ ಸಿಬ್ಬಂದಿ ತಡೆದು ಅವಮಾನ ಮಾಡಿದ್ದಾರೆ. ಪಂಚೆ ಧರಿಸಿದವರಿಗೆ ಮಾಲ್ ಒಳಗೆ ಬಿಡುವುದಿಲ್ಲ, ನಮ್ಮ ಮಾಲ್‌ನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಸಿಬ್ಬಂದಿ ಹೇಳಿದ್ದಾರೆ.
ಮಾಲ್ ಸಿಬ್ಬಂದಿಯ ಈ ದರ್ಪಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರೈತನ ಮಗ ನಾಗರಾಜ್ ಎಂಬುವರು ಮಾಲ್ ಒಳಗೆ ಬಿಡಿ ಅಂತ ಮನವಿ ಮಾಡಿದರು ಸಿಬ್ಬಂದಿ ಅವರ ಪ್ರವೇಶ ನಿರಾಕರಿಸಿ ದರ್ಪ ತೋರಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿರೋ ನಾಗರಾಜ್ ಅವರು ಮಾಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವನ್ನು ಹರಿ ಬಿಟ್ಟಿದ್ದಾರೆ ವಿಡಿಯೋ ನೋಡಿದ ಸಾರ್ವಜನಿಕರು ಕೂಡ ಆಕ್ರೋಶ ಹೊರಹಾಕಿದ್ದಾರೆ.
Post a comment
Log in to write reviews