
ಸಿಬ್ಬಂದಿ ರೈಲ್ವೆ ಇಲಾಖೆಯಿಂದ ಸನ್ಮಾನ ಪಡೆಯುವ ಹುರುಪಿನಲ್ಲಿ ರೈಲ್ವೆ ಸಿಬ್ಬಂದಿಗಳೇ ಹಳಿಯ ಬೋಲ್ಡ್ ಸಡಿಲಗೊಳಿಸಿರುವ ಘಟನೆ ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಘಟನೆ ನಡೆದಿದೆ, ರೈಲ್ವೆ ಹಳಿಗಳನ್ನು ಟ್ಯಾಂಪರಿಂಗ್ ಮಾಡಿದ ಆರೋಪದ ಮೇಲೆ ರೈಲ್ವೆ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಸುಭಾಷ್ ಪೊದ್ದಾರ್ (39), ಮನೀಶ್ ಮಿಸ್ತ್ರಿ (28) ಮತ್ತು ಶುಭಂ ಜೈಸ್ವಾಲ್ (26) ಎಂಬ ಮೂವರು ಉದ್ಯೋಗಿಗಳು ರೈಲ್ವೆಯ ನಿರ್ವಹಣಾ ವಿಭಾಗದಲ್ಲಿ ಟ್ರ್ಯಾಕ್‌ಮೆನ್‌ಗಳಾಗಿದ್ದು ಮೂವರನ್ನೂ ಅರೆಸ್ಟ್ ಮಾಡಲಾಗಿದೆ. ರೈಲು ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ ಎಂದು ರೈಲ್ವೆ ಇಲಾಖೆಯವರಿಗೆ ತಿಳಿಸಿದರೆ ತಮ್ಮನ್ನು ಸನ್ಮಾನಿಸುತ್ತಾರೆ ಎಂದು ಭಾವಿಸಿ ಸಿಬ್ಬಂದಿಗಳು ಈ ಕೃತ್ಯವೆಸಗಿದ್ದಾರೆ. ಸೆಪ್ಟೆಂಬರ್ 21 ರಂದು ರೈಲುಗಳನ್ನು ಹಳಿತಪ್ಪಿಸುವ ಪ್ರಯತ್ನದಲ್ಲಿ ಫಿಶ್ ಪ್ಲೇಟ್‌ಗಳನ್ನು ತೆಗೆದು ಹಾಕಿ ಮತ್ತು ಹಲವಾರು ಬೋಲ್ಟ್‌ಗಳನ್ನು ಸಡಿಲಗೊಳಿಸಿ ರೈಲ್ವೆ ಹಳಿಯನ್ನು ಹಾಳು ಮಾಡಿದ್ದಾರೆ ಎಂದು ಸೂರತ್ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದರು.
Poll (Public Option)

Post a comment
Log in to write reviews