
ವೈಯಾಲಿಕಾವಲ್ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೌದು ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಸರಬರಾಜು ಮಾಡುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Poll (Public Option)

Post a comment
Log in to write reviews