ಟಾಪ್ 10 ನ್ಯೂಸ್
ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ

ನವದೆಹಲಿ: ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ ಮಧ್ಯಂತರ ಜಾಮೀನಿನ ಮೇಲೆ ಒಮ್ಮೆ ಬಿಡುಗಡೆ ಮಾಡಲಾಗಿತ್ತು. ಈ ಹಿಂದೆ ದೆಹಲಿ ನ್ಯಾಯಾಲಯದಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿಗೆ ಜಾಮೀನು ನೀಡಲಾಗಿತ್ತು. ಆದರೆ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಶುಕ್ರವಾರ ಹೈಕೋರ್ಟ್ ನ್ಯಾಯಮೂರ್ತಿ ಸುಧೀರ್‌ಕುಮಾರ್ ಜೈನ್ ಮಧ್ಯಂತರ ತಡೆ ನೀಡಿದ್ದರು.
ಜಾಮೀನು ಪ್ರಶ್ನಿಸಿ ಇಡಿ ತಕ್ಷಣವೇ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ತುರ್ತು ವಿಚಾರಣೆ ನಡೆದು ಜಾಮಿನು ಆದೇಶಕ್ಕೆ ಜಾರಿಗೆ ಎರಡು ದಿನಗಳ ಕಾಲ ಮಧ್ಯಂತರ ತಡೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್ ಅವರು ಪ್ರಸ್ತುತ ಮೇಲ್ಮನವಿ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews