
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಫುರ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ ಪ್ರಕರಣದಲ್ಲಿ ನಾಲ್ಕು ಜನರನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ಕೌಶಿಕ್, ಚಂದು, ಶ್ರೀನಾಥ್, ನಿತಿನ್ ಬಂಧಿತ ಆರೋಪಿಗಳು.
ಪೊಲೀಸ್ ವಿಚಾರಣೆ ವೇಳೆ ಆರೋಪಿಗಳು ಮದ್ಯದ ಅಮಲಿನಲ್ಲಿ ಕಲ್ಲು ಹೊಡೆದಿರುವುದಾಗಿ ಮಾಹಿತಿಯನ್ನು ನೀಡಿದ್ದಾರೆ.
ಜೂನ್ 5 ರಂದು ಪುಂಡರು ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದರು, ಈ ಪ್ರಕರಣ ಎಲ್ಲೆಡೆ ಬಹಳಾ ಸದ್ದು ಮಾಡಿತ್ತು. ಸಿಸಿ ಟಿವಿ ದೃಶ್ಯಾವಳಿಯ ಆಧಾರದ ಮೇಲೆ ಪೊಲೀಸರು ಪುಂಡರಿಗೆ ಬಲೆ ಬೀಸಿದ್ದು, ಸದ್ಯ ಪುಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Poll (Public Option)

Post a comment
Log in to write reviews