2024-09-19 09:19:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೋಟಿ ಸಿನಿಮಾದ ಟ್ರೈಲರ್‌ ರಿಲೀಸ್

ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಈ ಟ್ರೈಲರ್‌ನಲ್ಲಿ ಡಾಲಿ ಧನಂಜಯ್ ಕೋಟಿ ಹೆಸರಿನಲ್ಲಿ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ಹೊಂದಿರುತ್ತಾನೆ.. ಕೋಟಿಯ ಈ ಪಯಣದ ಕಥೆ‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
ಟ್ರೈಲರ್‌ ಬಗ್ಗೆ ಮಾತನಾಡಿದ ನಾಯಕ ನಟ ಡಾಲಿ ಧನಂಜಯ, ಇದೊಂದು ಮಿಡಲ್ ಕ್ಲಾಸ್ ಸಾಮಾನ್ಯ ವ್ಯಕ್ತಿಯ ಕತೆ ಅಂತ ಹೇಳಿದ್ದಾರೆ.. ಅಲ್ಲದೇ ಇದು ಎಲ್ಲರಿಗೂ ಕನೆಕ್ಟ್ ಆಗುವ ಫ್ಯಾಮಿಲಿ ಎಂಟರ್ಟೈನರ್‌ ಎಂದು ಹೇಳಿದ್ದಾರೆ.. ಇನ್ನು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಪರಮ್ ಇದೊಂದು ಕಂಟೆಂಟ್ ಇರುವ ಕಮರ್ಷಿಯಲ್ ಸಿನಿಮಾ. ಒಂದೊಳ್ಳೆ ಕಥೆ, ಒಳ್ಳೆ ಮನರಂಜನೆ ಗ್ಯಾರಂಟಿ ಎಂದರು.
ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.
ಚಿತ್ರದಲ್ಲಿ ಐದು ಹಾಡುಗಳಿದ್ದು, ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು  ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಛಾಯಾಗ್ರಾಹಕರಾಗಿ ಅರುಣ್ ಅವರು ಈ ಸಿನಿಮಾವನ್ನು ಕ್ಯಾಮರಾದಲ್ಲಿ ಸೆರೆಹಿಡಿದ್ದಿದ್ದು, ಕೋಟಿ ಸಿನ್ಮಾ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
 

Post a comment

No Reviews