
ಇಬ್ಬರು ಮಕ್ಕಳು ಸೇರಿ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಜಿರಾನಿಯಾದ ಉಪವಿಭಾಗದ ಪೊಲೀಸ್ ಅಧಿಕಾರಿ ಕಮಲ್ ಕೃಷ್ಣ ಕೊಲೊಯ್ ತಿಳಿಸಿದ್ದಾರೆ. ಹತ್ಯೆಗೀಡಾದ ಮಹಿಳೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Poll (Public Option)

Post a comment
Log in to write reviews