ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕನಗರದಲ್ಲಿ ನಡೆದಿದೆ.
ಮಹಿಳೆಯನ್ನು ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಕತ್ತರಿಸಿ ಬಳಿಕ ಫ್ರಿಡ್ಜ್ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹತ್ಯೆ ಬಳಿಕ ಮೃತ ದೇಹವನ್ನು ಫ್ರಿಡ್ಜ್ನಲ್ಲಿ ಇರಿಸಿ ಮಗುವನ್ನು ಮನೆಯಲ್ಲೇ ಬಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. ಕಳೆದ 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ 2-3 ತಿಂಗಳಿನಿಂದ ಕುಟುಂಬ ಸಮೇತ ವೈಯಾಲಿಕಾವಲ್ನ ವಿನಾಯಕನಗರದಲ್ಲಿ ಮನೆಯಲ್ಲಿ ಬಾಡಿಗೆಗಿದ್ದರು. ದುರ್ನಾತದಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ದೆಹಲಿಯಲ್ಲೂ ಇದೇ ಮಾದರಿಯ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶ್ರದ್ಧಾ ವಾಕರ್ನನ್ನು ಹತ್ಯೆ ಮಾಡಿದ್ದ ಘಟನೆ ನಡೆದಿತ್ತು. ಆರೋಪಿ ಅಫ್ತಾಬ್ ತನ್ನ ಗೆಳತಿ ಶ್ರದ್ಧಾ ವಾಕರ್ ಕತ್ತು ಹಿಸುಕಿ ಕೊಲೆ ಮಾಡಿದ ನಂತರ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ಬಳಿಕ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು 3 ವಾರಗಳ ಕಾಲ ಫ್ರಿಡ್ಜ್ನಲ್ಲಿ ಇರಿಸಿದ್ದ. ನಂತರ ವಿವಿಧೆಡೆ ಬಿಸಾಡಿದ್ದ. ಇದೀಗ ಅದೇ ರೀತಿಯ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.
Post a comment
Log in to write reviews