
ಹಾಸನ: ಒಂದೇ ಸ್ಥಳದಲ್ಲಿ ನಿಂತಲ್ಲೇ ನಿಂತು ಕೊನೆಗೆ ಅನಾರೋಗ್ಯದಿಂದ ಹೆಣ್ಣಾನೆವೊಂದು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಣಗೂರು ಬಳಿ ನಡೆದಿದೆ.
ಕಳೆದ ಮೂರು ದಿನಗಳಿಂದ ಪ್ರಾಣ ಬಿಟ್ಟ ದಾರುಣ ಘಟನೆ ನಡೆದಿದೆ. ಅನಾರೋಗ್ಯದಿಂದ ಆಹಾರ ತ್ಯಜಿಸಿ ನರಳುತ್ತಿದ್ದ ಹೆಣ್ಣಾನೆಗೆ ಇಂದು ಅರಣ್ಯ ಇಲಾಖೆಯವರು ಚಿಕಿತ್ಸೆ ನೀಡಲು ಮುಂದಾಗಿದ್ದರು. ಈ ವೇಳೆ ಮೃತಪಟ್ಟಿರುವುದು ಬೆಳಿಕಿಗೆ ಬಂದಿದೆ.
ಇನ್ನೂ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು ಇಪ್ಪತ್ತು ವರ್ಷದ ಹೆಣ್ಣಾನೆ ಇದಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಅಂತ್ಯಕ್ರಿಯೆ ಮಾಡಲು ನಿರ್ಧರಿಸಲಾಗಿದೆ.
Poll (Public Option)

Post a comment
Log in to write reviews