
ಶಿವಮೊಗ್ಗ: ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದ ಯುವತಿ ಎಂದು ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್ ನನ್ನು ಪೀಡಿಸುತ್ತಿದ್ದಳು ಎನ್ನಲಾಗಿದೆ. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.
Poll (Public Option)

Post a comment
Log in to write reviews