
ಬೆಂಗಳೂರು: ಒಂದು ವರ್ಷದಲ್ಲಿ ಈ ಸರ್ಕಾರ ಚೆನ್ನಾಗಿ ಲೂಟಿ ಮಾಡಿದೆ. ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆಂದು ಹೇಳಿ ನೀರಿನ ಸಮಸ್ಯೆ ತಂದು ಬ್ಯಾಡ್ ಬೆಂಗಳೂರು ಮಾಡಿದ್ದಾರೆ. 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾಡುತ್ತೇವೆಂದು ಕಮಿಶನ್ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಯಾವುದೇ ಡೆವಲಪರ್ ಬಂದರೂ ಚದರ ಅಡಿಗೆ 100 ರೂ. ಕಾಂಗ್ರೆಸ್ ಟ್ಯಾಕ್ಸ್ ಎಂಬ ಕಮಿಶನ್ ಕೊಡಬೇಕಾಗುತ್ತದೆ. ಈ ಕಮಿಶನ್ ಸಾಗಿಸಲು ಸುರಂಗ ನಿರ್ಮಿಸಲು ಯೋಜನೆ ಮಾಡಿದ್ದಾರೆ. ಇಂತಹ ಸರ್ಕಾರ ಇದ್ದರೂ ಒಂದೇ, ಹೋದರೂ ಒಂದೇ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್ ಶುರುವಾಗಿದೆ ಎಂದರು.
Poll (Public Option)

Post a comment
Log in to write reviews