2024-09-19 04:51:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್‌ನಲ್ಲಿ ಒಳ ಜಗಳವಿಲ್ಲ: ಗೃಹ ಸಚಿವ ಪರಮೇಶ್ವರ!

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪ ಸುಳ್ಳು ಹಾಗೂ ಪಕ್ಷದಲ್ಲಿ ಯಾವುದೇ ಒಳ ಜಗಳಗಳಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ನೀತಿ ಸಂಹಿತೆ ಜಾರಿ ಮುಗಿದಿದ್ದು, ಕಳೆದ ಎರಡು ತಿಂಗಳು ಸರ್ಕಾರದ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿಲ್ಲ. ಈಗ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುತ್ತೇವೆ ಎಂದರು.
ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಹಂಚಿಕೊಳ್ಳಲು ಸಚಿವ ಸಂಪುಟ ಇದೆ. ಪಕ್ಷಕ್ಕೆ ಸಂಬಂಧಪಟ್ಟ ತೀರ್ಮಾನ ಕೈಗೊಳ್ಳಲು ಕೋರ್‌ಕಮಿಟಿ ಸಭೆ ಮಾಡಬಹುದು. ಇದಕ್ಕೆ ಅವಕಾಶವನ್ನು ಪಕ್ಷದ ಅಧ್ಯಕ್ಷರು ಕೊಡಬೇಕಾಗುತ್ತದೆ. ಸಂದರ್ಭ ಬಂದಾಗ ಅವರು ಮಾಡುತ್ತಾರೆ ಎಂದರು. 
ಪ್ರಬಲ ಸಚಿವರ ಕ್ಷೇತ್ರಗಳಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವುದಕ್ಕೆ ಸಮಿತಿ ರಚನೆ ಮಾಡಿರುವ ಕುರಿತು ಪ್ರತಿಕ್ರಿಯಿಸಿ, ನನ್ನ ಜಿಲ್ಲೆ ಸೇರಿದಂತೆ 17 ಜಿಲ್ಲೆಗಳಲ್ಲಿ ಸೋತಿದ್ದೇವೆ. ಈ ಬಗ್ಗೆ ಪರಿಶೀಲನೆ ಮಾಡುವ, ಆತ್ಮಾವಲೋಕನಾ ಮಾಡಿಕೊಳ್ಳುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ನಾವೆಲ್ಲ ಅದನ್ನು ಒಪ್ಪುತ್ತೇವೆ. ಮುಂದೆ ನಮಗೆ ಏನು ಸಲಹೆ ಮಾಡುತ್ತಾರೆ. ಅದನ್ನು ಪಾಲನೆ ಮಾಡುವ ಪದ್ಧತಿ ನಮ್ಮ ಪಕ್ಷದಲ್ಲಿದೆ ಎಂದರು.
 

Post a comment

No Reviews