
ಮೈಸೂರು: ಮಹದೇವಪ್ಪ ಮನೆಯಲ್ಲಿ ಡಿನ್ನರ್‌ಗಾಗಿ ಸೇರಿದ್ದೆವು ಅಷ್ಟೆ ಯಾವುದೇ ರಾಜಕೀಯ ಚರ್ಚೆಗಾಗಿ ಅಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಮನೆಯಲ್ಲಿ ಡಿನ್ನರ್ ಏರ್ಪಾಡು ಮಾಡಲಾಗಿತ್ತು. ಊಟಕ್ಕೆ ಹೋಗಿದ್ದೆವು. ಯಾವ ಮೀಟಿಂಗ್ ಇಲ್ಲ, ಡಿನ್ನರ್ ಅಷ್ಟೇ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಸಹಜವಾಗಿ ಊಟಕ್ಕೆ ಸೇರಿದ್ದೆವು ಎಂದು ತಿಳಿಸಿದರು.
ಡಿನ್ನರ್‌ನಲ್ಲಿ ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಶಾಸಕ ಎ.ಆರ್ ಕೃಷ್ಣ ಮೂರ್ತಿ ಭಾಗಿಯಾಗಿದ್ದೆವು. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಊಟದ ವೇಳೆ ಸಿಎಂ ಬದಲಾವಣೆ ಅದು ಇದು ಯಾವ ವಿಚಾರವೂ ಚರ್ಚೆ ಮಾಡಿಲ್ಲ. ವಿರೋಧ ಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ. ಕಾಂಗ್ರೆಸ್‌ನಲ್ಲಿ ಯಾವ ಬದಲಾವಣೆ ಬಗ್ಗೆಯೂ ಚರ್ಚೆ ಆಗಿಲ್ಲ ಎಂದರು.
Poll (Public Option)

Post a comment
Log in to write reviews