2024-11-08 08:17:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಖ್ಯಮಂತ್ರಿ ಬದಲಾವಣೆ ತೀರ್ಮಾನದಲ್ಲಿ ಯಾರೂ ಬಾಯಿ ತೂರಿಸೋ ಅವಶ್ಯಕತೆಯಿಲ್ಲ: ಸಚಿವ ಚೆಲುವರಾಯಸ್ವಾಮಿ 

ಹುಬ್ಬಳ್ಳಿ : ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷದ ನಾಯಕರು, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಕುಳಿತು ತೀರ್ಮಾನ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲ, ಹಾಗಾಗಿ ಈ ವಿಚಾರದಲ್ಲಿ ಬಾಯಿ ತೂರಿಸೋ ಅವಶ್ಯಕತೆಏನಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ನಿನ್ನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ ತಮ್ಮ ಸಂತೋಷಕ್ಕೆ ಹೇಳಿದ್ದಾರೆ. ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಗೋ ಕಾಲ ಬಂದಾಗ ಆಗುತ್ತದೆ. ಪಕ್ಷ ನಿರ್ಧರಿಸುತ್ತದೆ. ಪಕ್ಷ ಅಧಿಕಾರಕ್ಕೆ ಬರಲು ವರಿಷ್ಠರು ಸಹಾಯ ಮಾಡಿದ್ದಾರೆ. ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಅವರ ಉದ್ದೇಶ ಒಳ್ಳೆ ಆಡಳಿತ ಕೊಡಬೇಕು ಅನ್ನೋದು. ಸ್ವಾಮೀಜಿಗಳು ಅವರ ಅಭಿಪ್ರಾಯ ಹೇಳಿದ್ದಾರೆ. ನಮಲ್ಲಿ ಅಂತಹ ಗೊಂದಲ ಇಲ್ಲ. ಪಕ್ಷದ ನಾಯಕರು, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಕುಳಿತು ತೀರ್ಮಾನ ಮಾಡುತ್ತಾರೆ. ನಾವು ಮೀಡಿಯ ಅವರಿಗೆ ಆಹಾರ ಆಗೋ ಬದಲು ಸುಮ್ಮನಿದ್ದರೆ ಒಳ್ಳೆಯದು. ಸದ್ಯಕ್ಕೆ ಯಾವುದೇ ಗೊಂದಲಗಳಿಲ್ಲ ಎಂದರು.
ಚನ್ನಪಟ್ಟಣದಲ್ಲಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಡಿ.ಕೆ ಶಿವಕುಮಾರ್ ಸ್ಪರ್ಧೆ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ, ಸಚಿವ ನನಗೂ ರಿಪೋರ್ಟ್ ಕೇಳಿದ್ದಾರೆ. ನಾನಿನ್ನೂ ಸಭೆ ನಡೆಸಿಲ್ಲ. ಮೀಟಿಂಗ್ ಮಾಡಿ ವರದಿ ಕೊಡುತ್ತೇನೆ. ಆ ಮೇಲೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತೀರ್ಮಾನ ಮಾಡುತ್ತಾರೆ. ಸೋತಿದ್ದೇವೆ, ಗೆಲ್ಲಬೇಕು ಅನ್ನೋದಿದೆ. ದೊಡ್ಡವರ ಸೀಟ್ ಅದು, ಅವರು ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ನಾವು ಅವರ ವಿರುದ್ಧ ತೊಡೆ ತಟ್ಟೋಕೆ ಆಗುತ್ತಾ?. ಜನರ ಮಧ್ಯೆ ಹೋಗುತ್ತೇವೆ. ಏನಾಗುತ್ತದೆಯೆಂಬುದನ್ನು ನೋಡೋಣ. ಸಿಎಂ ವಿಚಾರವಾಗಿ ಹಲವು ಗೊಂದಲಗಳಿವೆ. ಸರ್ಕಾರ ರಚನೆಯಾಗಿ ಎರಡೇ ತಿಂಗಳಿಗೆ ಹೊರಟು ಹೋಗುತ್ತದೆ ಅಂದ್ರು. ಆದ್ರೆ ಏನೂ ಆಗಿಲ್ಲ. ನಾವೆಲ್ಲ ಚೆನ್ನಾಗಿದ್ದೇವೆ. ಯಾವುದೇ ಗೊಂದಲ ಇಲ್ಲ. ಕೆಲವರು ನಮ್ಮ ಸ್ನೇಹಿತರು ಮಾತನಾಡಿ ಎಲ್ಲರನ್ನೂ ಡೈವರ್ಟ್ ಮಾಡುತ್ತಿದ್ದಾರೆ. ನಾವು ಮತಗೋಸ್ಕರ ಗ್ಯಾರಂಟಿ ಕೊಟ್ಟಿಲ್ಲ. ಬಡವರಿಗಾಗಿ ಈ ಯೋಜನೆಗಳನ್ನು ತಂದಿದ್ದೇವೆ. ಸಾರ್ವಜನಿಕರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಗ್ಯಾರಂಟಿಗಳನ್ನು ತಂದಿದ್ದೇವೆ. ಗ್ಯಾರಂಟಿ ನಿಲ್ಲಿಸೋ ಯೋಚನೆಯೇ ಇಲ್ಲ. ಮುಖ್ಯಮಂತ್ರಿಗಳೂ ಕೂಡ ಈಗಾಗಲೇ ಹಲವು ಬಾರಿ ತಿಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

Post a comment

No Reviews